ಕಸಾಪ | ಕನ್ನಡ ಸಾಹಿತ್ಯ ಪರಿಷತ್ತು

ಗುರುವಾರ ಮಾರ್ಚಿ 13ರಂದು ಕನ್ನಡ ಸಾಹಿತ್ಯ ಪರಿಷತ್ತಿನ ‘ಡಾ.ಹೆಚ್.ಕೆ.ಮರಿಯಪ್ಪ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ 

11 Mar, 2025

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2025ನೆಯ ಸಾಲಿನ   ‘ಡಾ.ಹೆಚ್.ಕೆ.ಮರಿಯಪ್ಪ ದತ್ತಿ ಪ್ರಶಸ್ತಿ’ಯನ್ನು  ಡಾ.ಸೀಮಾರಾಣಿ ಎಂ. ಅವರಿಗೆ  ಗುರುವಾರ 13.3.2025ರ ಬೆಳಿಗ್ಗೆ 11.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.  

ಕಾರ್ಯಕ್ರಮದ ಉದ್ಘಾಟನೆಯನ್ನು  ಕರ್ನಾಟಕ ರಾಜ್ಯ ಪೋಲೀಸ್ ದೂರುಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಎನ್.ಕೆ.ಸುಧೀಂದ್ರ ರಾವ್ ಅವರು ವಹಿಸಲಿದ್ದು,  ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಬ್ರೈನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಹಾಗೂ ನರಶಾಸ್ತ್ರಜ್ಞರಾಗಿರುವ ಡಾ.ಎನ್.ಕೆ.ವೆಂಕಟರಮಣ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚನ್ನಪಟ್ಟಣದ ಸಾರ್ವಜನಿಕ ವಿದ್ಯಾಸಂಸ್ಥೆಯ ಮಾಜಿ ಅಧ್ಯಕ್ಷರಾದ ಬಿ.ಟಿ.ಜಯಮುದ್ದಪ್ಪನವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಡಾ.ಸೀಮಾ ರಾಣಿಯವರನ್ನು ಈ ಪುರಸ್ಕಾರಕ್ಕೆ  ಆಯ್ಕೆ ಮಾಡಲಾಗಿದ್ದು  ಅಪ್ರತಿಮ ಕ್ರಿಯಾಶೀಲತೆ ಮತ್ತು ದಕ್ಷತೆಯಿಂದ ವೈದ್ಯಕೀಯ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯನ್ನು ನೀಡಿದ ಡಾ.ಎಚ್.ಕೆ.ಮರಿಯಪ್ಪನವರು  ತಮ್ಮ ಮಡದಿ ಡಾ. ಶಾಂತಾ ಅವರ ಜೊತೆಗೂಡಿ ಅರವತ್ತು ವರ್ಷಗಳು  ಅಮೆರಿಕಾದಲ್ಲಿ ನೆಲೆ ನಿಂತು ಅಪಾರ ಸೇವೆಯನ್ನು ಸಲ್ಲಿಸುವುದರ ಜೊತೆಗೆ ಕನ್ನಡದ ಕಂಪನ್ನು ಸದಾ ತಮ್ಮೊಂದಿಗೆ ಉಳಿಸಿಕೊಂಡು ಬಂದವರು. ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿಯನ್ನು  ಸ್ಥಾಪಿಸಿದ್ದು  ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿದ ಅಥವಾ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಕೊಡುಗೆ  ನೀಡಿದವರನ್ನು ಪರಿಗಣಿಸಲು ಸೂಚಿಸಿರುತ್ತಾರೆ. 

ಸಾಂಸ್ಕೃತಿಕ ಮಹತ್ವದ ಈ ಸುದ್ದಿಯನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸುವದರೊಂದಿಗೆ ಕಾರ್ಯಕ್ರಮಕ್ಕೆ ತಮ್ಮ ವರದಿಗಾರರು ಮತ್ತು ಛಾಯಾಗ್ರಾಹಕರನ್ನು ಕಳುಹಿಸಿ ಕೊಡಲು ವಿನಂತಿಸಲಾಗಿದೆ. 


 
ಎನ್.ಎಸ್.ಶ್ರೀಧರ ಮೂರ್ತಿ
ಸಂಚಾಲಕರು, ಪ್ರಕಟಣಾ ವಿಭಾಗ
ಕನ್ನಡ ಸಾಹಿತ್ಯ ಪರಿಷತ್ತು

Publisher: ಕಸಾಪ | ಕನ್ನಡ ಸಾಹಿತ್ಯ ಪರಿಷತ್ತು

Login to Give your comment
Powered by